ನನ್ನ ಪ್ರೀತಿಯ ಕೋರಿಕೆಗೆ ಬೆಲೆಕೊಟ್ಟು ಶಾಂತ ರೀತಿಯಲ್ಲಿ ಹುಟ್ಟುಹಬ್ಬದ ಆಚರಣೆಗೆ ಸಹಕರಿಸಿದ ಅಭಿಮಾನಿ ವರ್ಗಕ್ಕೆ ಹಾಗೂ ಪೊಲೀಸ್ ಸಿಬ್ಬಂದಿಗಳಿಗೆ ನನ್ನ ಹೃದಯಪೂರ್ವಕ ವಂದನೆಗಳು. ನನ್ನ ಹುಟ್ಟುಹಬ್ಬಕ್ಕೆ ಶುಭಾಶಯಗಳು ತಿಳಿಸಿದ ಪ್ರಿಯ ಬಂಧು-ಮಿತ್ರರು, ಚಿತ್ರರಂಗದ ಸ್ನೇಹಿತರು, ಎಲ್ಲಾ ಮೀಡಿಯಾ ಮಿತ್ರರು, ರಾಜಕೀಯ ಗಣ್ಯರು, ಪ್ರೀತಿಯ ಸೆಲೆಬ್ರಿಟಿಗಳಿಗೆ ನನ್ನ ಅನಂತ ಅನಂತ ವಂದನೆಗಳು. ಹುಟ್ಟುಹಬ್ಬದ ಪ್ರಯುಕ್ತ ಅನೇಕ ಅನಾಥಾಶ್ರಮ ಹಾಗೂ ವೃದ್ದಾಶ್ರಮಗಳಲ್ಲಿ ತಮ್ಮ ಕೈಲಾದ ಸೇವೆ ಮಾಡಿದ ಅಭಿಮಾನಿಗಳಿಗೆ ನನ್ನ ಅಭಿನಂದನೆಗಳು.
ಈ ನಿಮ್ಮ ಪ್ರೀತಿ-ಅಭಿಮಾನಕ್ಕೆ ಎಂದಿಗೂ ಬೆಲೆ ಕಟ್ಟಲಾಗುವುದಿಲ್ಲ. ಧನ್ಯೋಸ್ಮಿ ಕರ್ನಾಟಕ 🙏🏾