ಶ್ರೀ ಬಿ.ಕೆ. ಹರಿಪ್ರಸಾದ್ ಅವರ ಕೆಪಿಸಿಸಿ ಅಧ್ಯಕ್ಷರಾಗಿ ಪದಗ್ರಹಣ ಕಾರ್ಯಕ್ರಮದ ಸಿದ್ಧತೆಗಳ ಕುರಿತು ಇಂದು ಇಂದಿರಾ ಗಾಂಧಿ ಭವನದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದೆ.
ಪಕ್ಷದ ಮುಖಂಡರೊಂದಿಗೆ ಕಾರ್ಯಕ್ರಮದ ರೂಪುರೇಷೆ ಹಾಗೂ ಅಗತ್ಯ ವ್ಯವಸ್ಥೆಗಳ ಬಗ್ಗೆ ಚರ್ಚಿಸಲಾಯಿತು.
ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿರುವ ಎಐಸಿಸಿ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ವಿಧಾನಸೌಧದಲ್ಲಿ ಚುನಾವಣಾಧಿಕಾರಿಗಳಿಂದ ಪ್ರಮಾಣಪತ್ರ ಸ್ವೀಕರಿಸಿದರು.
ಅವರ ನಾಯಕತ್ವ ಹಾಗೂ ಅನುಭವವು ರಾಜ್ಯಸಭೆಯಲ್ಲಿ ಮತ್ತಷ್ಟು ಪರಿಣಾಮಕಾರಿಯಾಗಿ ದೇಶದ ಧ್ವನಿಯಾಗಲಿ ಎಂದು ಹಾರೈಸುತ್ತೇನೆ.
@khar
ಕೆಪಿಸಿಸಿ ನೂತನ ಅಧ್ಯಕ್ಷರಾದ ಶ್ರೀ ಬಿ.ಕೆ. ಹರಿಪ್ರಸಾದ್ ಅವರು ಮೊದಲ ಬಾರಿಗೆ ಕೆಪಿಸಿಸಿ ರಾಜ್ಯ ಕಚೇರಿಗೆ ಆಗಮಿಸಿದ ಸಂದರ್ಭ,ಅವರ ನಾಯಕತ್ವದಲ್ಲಿ ಪಕ್ಷವು ಮತ್ತಷ್ಟು ಸಂಘಟಿತವಾಗಿ ಬಲಗೊಳ್ಳಲಿ ಎಂಬ ಶುಭ ಹಾರೈಕೆಗಳು.
#BKHariprasad
ಎಐಸಿಸಿ ಕಾರ್ಯದರ್ಶಿ ಹಾಗೂ ರಾಜ್ಯ ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಶ್ರೀ ಸೂರಜ್ ಹೆಗ್ಡೆ ಅವರ ಅಕಾಲಿಕ ನಿಧನಕ್ಕೆ ನನ್ನ ಭಾವಪೂರ್ಣ ಸಂತಾಪಗಳು.
ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ.
#OmShanti
ಶ್ರೀ ಡಿ.ಕೆ. ಶಿವಕುಮಾರ್ ಅವರಿಗೆ ಹೃತ್ಪೂರ್ವಕ ಶುಭ ಹಾರೈಕೆಗಳು. ಕರ್ನಾಟಕದ ಮುಖ್ಯಮಂತ್ರಿಯಾಗಿ ರಾಜ್ಯದ ಅಭಿವೃದ್ಧಿ, ಜನರ ಕಲ್ಯಾಣ ಮತ್ತು ಸಮೃದ್ಧಿಗಾಗಿ ನಿಮ್ಮ ನಾಯಕತ್ವ ಯಶಸ್ವಿಯಾಗಲಿ. 💐🙏
#DKShivakumar
ದಿನಾಂಕ 03-06-2026ರ ಬುಧವಾರ ಸಂಜೆ 4:05 ಗಂಟೆಗೆ ಕಾಂಗ್ರೆಸ್ ಭವನದಲ್ಲಿ ನಡೆಯಲಿರುವ ಸಭೆಗೆ ಎಲ್ಲಾ ಕೆಪಿಸಿಸಿ ಪದಾಧಿಕಾರಿಗಳು, ಡಿಸಿಸಿ ಅಧ್ಯಕ್ಷರು, ಮುಂಚೂಣಿ ಘಟಕ, ಸೆಲ್ ಹಾಗೂ ವಿಭಾಗಗಳ ರಾಜ್ಯಾಧ್ಯಕ್ಷರು ಮತ್ತು ಎಲ್ಲಾ ಬಿಸಿಸಿ ಅಧ್ಯಕ್ಷರುಗಳು (Parent Body) ತಪ್ಪದೇ ಆಗಮಿಸಬೇಕೆಂದು ಕೋರಲಾಗಿದೆ.
#KPCC#CongressKarnataka
ಕೆಪಿಸಿಸಿ ವತಿಯಿಂದ ಸೂಚನೆ
ಮಾನ್ಯ ಡಿ.ಕೆ. ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಪಕ್ಷದ ಎಲ್ಲಾ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಕೆಪಿಸಿಸಿ ವತಿಯಿಂದ ನೀಡಲಾಗುವ ಸೂಚನೆಗಳನ್ನು ಪಾಲಿಸಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಬೇಕಾಗಿ ವಿನಂತಿ.
#KPCC#KPCC#CongressKarnataka
ಕೆಪಿಸಿಸಿ ಕಚೇರಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರು ಹಾಗೂ ವಿಧಾನಸಭಾ ಕ್ಷೇತ್ರಗಳ ಅಧ್ಯಕ್ಷರ ಸಭೆ ನಡೆಯಿತು.
ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ರಣದೀಪ್ ಸಿಂಗ್ ಸುರ್ಜೇವಾಲಾ ಉಪಸ್ಥಿತರಿದ್ದು, ಪಕ್ಷ ಸಂಘಟನೆ ಬಲವರ್ಧನೆ ಹಾಗೂ ಮುಂಬರುವ ಚುನಾವಣಾ ಸಿದ್ಧತೆಗಳ ಕುರಿತು ಚರ್ಚೆ ನಡೆಸಲಾಯಿತು.
ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಚುನಾವಣಾ ಸಿದ್ಧತೆಗಳ ಕುರಿತು ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ರಣದೀಪ್ ಸಿಂಗ್ ಸುರ್ಜೇವಾಲಾ ಹಾಗೂ ಇತರ ಪಕ್ಷದ ನಾಯಕರ ಜೊತೆ ಸಭೆ ನಡೆಸಲಾಯಿತು.
ಪಕ್ಷದ ಸಂಘಟನೆ ಬಲವರ್ಧನೆ, ಕಾರ್ಯಕರ್ತರ ಸಕ್ರಿಯ ಪಾಲ್ಗೊಳ್ಳುವಿಕೆ ಹಾಗೂ ಪರಿಣಾಮಕಾರಿ ಚುನಾವಣಾ ಕಾರ್ಯಯೋಜನೆ ಕುರಿತು ಚರ್ಚೆ ನಡೆಸಲಾಯಿತು.
ಕೆಪಿಸಿಸಿ ವತಿಯಿಂದ ನಡೆದ ಎಸ್‌ಐಆರ್ ಪ್ರಕ್ರಿಯೆ, ಜಿಬಿಎ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ಮತ್ತು ಪಕ್ಷ ಸಂಘಟನೆ ಕುರಿತ ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ರಣದೀಪ್ ಸಿಂಗ್ ಸುರ್ಜೇವಾಲಾ, ಡಿಸಿಎಂ ಡಿ.ಕೆ. ಶಿವಕುಮಾರ್, ಸಿಎಂ ಸಿದ್ದರಾಮಯ್ಯ ಸೇರಿದಂತೆ ಮುಖಂಡರೊಂದಿಗೆ ಭಾಗವಹಿಸಿದೆ.
“One Nation One Election” ಕುರಿತು ರಚಿಸಲಾದ ಸಂಯುಕ್ತ ಸಂಸತ್ತಿನ ಸಮಿತಿಯ ಅಧ್ಯಯನ ಭೇಟಿ ಕಾರ್ಯಕ್ರಮದಲ್ಲಿ ಭಾಗವಹಿಸಿ, ಚುನಾವಣಾ ಸುಧಾರಣೆಗಳು ಹಾಗೂ ಪ್ರಜಾಪ್ರಭುತ್ವದ ಬಲವರ್ಧನೆ ಕುರಿತಂತೆ ಸಮಗ್ರ ಚರ್ಚೆ ನಡೆಸಲಾಯಿತು. ದೇಶದ ಆಡಳಿತ ವ್ಯವಸ್ಥೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿಸುವ ವಿವಿಧ ಆಯಾಮಗಳ ಬಗ್ಗೆ ಅಭಿಪ್ರಾಯ ವಿನಿಮಯ ನಡೆಯಿತು.
ಕೆಪಿಸಿಸಿ ಕಚೇರಿಯಲ್ಲಿ ನಡೆದ 35ನೇ ವರ್ಷದ ಅಖಿಲ ಭಾರತ ರಾಜೀವ್ ಗಾಂಧಿ ಜ್ಯೋತಿ ಯಾತ್ರೆಗೆ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಾಜ್ಯಾಧ್ಯಕ್ಷರಾದ ಹೆಚ್.ಎಂ. ರೇವಣ್ಣ ಅವರು ಹಾಗೂ ವಿಧಾನ ಪರಿಷತ್ ಆಡಳಿತ ಪಕ್ಷದ ಮುಖ್ಯಸಚೇತಕರಾದ ಸಲೀಂ ಅಹ್ಮದ್ ಅವರು ಉಪಸ್ಥಿತರಿದ್ದರು.
ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಐದು ನಗರ ಪಾಲಿಕೆಗಳ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ನೂತನ ಅಧ್ಯಕ್ಷರೊಂದಿಗೆ ಸಭೆ ನಡೆಸಿ, ಗ್ಯಾರಂಟಿ ಯೋಜನೆಗಳನ್ನು ಜನರಿಗೆ ತಲುಪಿಸುವ ಕುರಿತು ಚರ್ಚೆ ನಡೆಸಿದೆನು.
ರಾಜ್ಯ ರಾಜಧಾನಿಯ ಪಂಚ ಪಾಲಿಕೆಗಳ ಚುನಾವಣೆಯ ಕುರಿತು ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಹಾಗೂ ರಾಜ್ಯ ಉಸ್ತುವಾರಿಗಳಾದ ಶ್ರೀ ರಣದೀಪ್ ಸಿಂಗ್ ಸುರ್ಜೇವಾಲಾ, ಎಐಸಿಸಿ ಕಾರ್ಯದರ್ಶಿಗಳಾದ ಅಭಿಷೇಕ್ ದತ್ ಅವರೊಂದಿಗೆ ಐದು ಡಿಸಿಸಿ ಅಧ್ಯಕ್ಷರುಗಳ ಸಭೆಯನ್ನು ಆಯೋಜಿಸಿ,ಗ್ರೇಟರ್ ಬೆಂಗಳೂರು ಅಥಾರಿಟಿ ಚುನಾವಣೆಯ ಬಗ್ಗೆ ಸುಧೀರ್ಘವಾಗಿ ಚರ್ಚಿಸಲಾಯಿತು
ಕೆ.ಆರ್.ಪುರಂನಲ್ಲಿ ಬೆಂಗಳೂರು ನಗರ ಪೂರ್ವ ಜಿಲ್ಲಾ ಸಮಿತಿ, ಕೆಪಿಸಿಸಿ – GBA ಚುನಾವಣೆ ಸಿದ್ಧತಾ ಸಭೆ.
BLA-2, ವಾರ್ಡ್ ಹಾಗೂ ಬ್ಲಾಕ್ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಹಿರಿಯ ನಾಯಕರೊಂದಿಗೆ ಚರ್ಚೆ ನಡೆಸಿದೆನು.