ಬೆಂಗಳೂರಿನ ಜವಾಹರ ಲಾಲ್ ನೆಹರು ತಾರಾಲಯದಲ್ಲಿ ಏರ್ಪಡಿಸಲಾಗಿದ್ದ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಗೆ ಅತ್ಯುತ್ತಮ ಸ್ಪಂದನೆ ವ್ಯಕ್ತವಾಗಿದ್ದು, ಭಾಗವಹಿಸಿದ್ದ ಎಲ್ಲ ವಿದ್ಯಾರ್ಥಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿರುವುದು ನನಗೆ ಸಂತಸವನ್ನುಂಟು ಮಾಡಿದೆ.
ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ, ಹಾವೇರಿಯ ತೊಂಡುರು ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರು ಸ್ಪರ್ಧೆಯ ಕುರಿತು ಶ್ಲಾಘಿಸಿ ಪತ್ರ ಬರೆದಿದ್ದಾರೆ.
ಈ ಸ್ಪರ್ಧೆಯಲ್ಲಿ ಭಾಗವಹಿಸಲು ಕನ್ನಡ ಮಾಧ್ಯಮದ ಸರ್ಕಾರಿ ಶಾಲೆಗಳಿಗೆ ಮಾತ್ರ ಅವಕಾಶ ಕಲ್ಪಿಸಿ ಕೊಟ್ಟಿರುವುದರಿಂದ ಕನ್ನಡ ಭಾಷೆ ಹಾಗೂ ಸರ್ಕಾರಿ ಶಾಲೆಗಳಿಗೆ ಹೆಚ್ಚಿನ ಉತ್ತೇಜನ ನೀಡಿದಂತಾಗಿದೆ. OMR ಮೂಲಕ ಉತ್ತರಿಸುವ ಪ್ರಶ್ನೆಪತ್ರಿಕೆ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿ, ನಮ್ಮ ಸರ್ಕಾರಕ್ಕೆ, ಅಧಿಕಾರಿಗಳಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ. ಸರ್ಕಾರಿ ಶಾಲೆಯ ವಿದ್ಯಾರ್ಥಿಗಳ ಬಗೆಗಿನ ನಿಮ್ಮ ಕಾಳಜಿ ಸ್ತುತ್ಯಾರ್ಹ.
ನಮ್ಮ ಸರ್ಕಾರವು ‘ಸರ್ವರಿಗೂ ವಿಜ್ಞಾನ, ಸುಲಭ ವಿಜ್ಞಾನ, ಸುಸ್ಥಿರ ಅಭಿವೃದ್ಧಿಗಾಗಿ ವಿಜ್ಞಾನ’ ಎಂಬ ಧ್ಯೇಯವಾಕ್ಯದಡಿ ಇಂತಹ ಹಲವಾರು ಕಾರ್ಯಕ್ರಮಗಳನ್ನು ನಡೆಸುತ್ತಿದ್ದು, ಇದಕ್ಕೆ ಶಿಕ್ಷಕರಾದ ನೀವು ಮಕ್ಕಳನ್ನು ಹೆಚ್ಚೆಚ್ಚು ಭಾಗವಹಿಸುವಂತೆ ಹುರಿದುಂಬಿಸಬೇಕು. ವಿದ್ಯಾರ್ಥಿಗಳ ಬೆಳವಣಿಗೆ ದೃಷ್ಟಿಯಿಂದ ಎಲ್ಲ ಸರ್ಕಾರಿ ಶಾಲೆಗಳ ಶಿಕ್ಷಕ ವೃಂದ ಇಂತಹ ಪ್ರೇರಣದಾಯಕ ಕಾರ್ಯಕ್ರಮಗಳಲ್ಲಿ ತಮ್ಮ ಮಕ್ಕಳನ್ನು ತೊಡಗಿಸಿಕೊಳ್ಳುವಂತೆ ಮಾಡಬೇಕು. ಮಕ್ಕಳನ್ನು ವೈಜ್ಞಾನಿಕ ತಳಹದಿಯಿಂದ ಬೆಳೆಸಬೇಕು. ಆಗ ಮಾತ್ರ ನಮ್ಮ ಕನಸಿನ ವಿಜ್ಞಾನ ನಾಡಿನ ನಿರ್ಮಾಣ ಸಾಧ್ಯ.
#ScienceQuize
#NehruTaralaya
@CMofKarnataka
@Madhu_Bangarapp
@JNPlanetarium