🌳 ಒಣಗಿದ & ಅಪಾಯಕಾರಿ ಮರಗಳ ತೆರವು ಕಾರ್ಯಾಚರಣೆಗೆ ಚುರುಕು | ಬೆಂಗಳೂರು ಪಶ್ಚಿಮ ನಗರ ಪಾಲಿಕೆ
ಬೆಂಗಳೂರು ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಒಣಗಿದ, ಅಪಾಯಕಾರಿ ಮರಗಳು ಹಾಗೂ ರೆಂಬೆ-ಕೊಂಬೆಗಳ ತೆರವು ಕಾರ್ಯಾಚರಣೆಗೆ ವೇಗ ನೀಡಲಾಗಿದೆ ಎಂದು ಆಯುಕ್ತರಾದ ಡಾ. ರಾಜೇಂದ್ರ ಕೆ.ವಿ ತಿಳಿಸಿದ್ದಾರೆ.
ರಾಜರಾಜೇಶ್ವರಿನಗರ, ಯಶವಂತಪುರ, ದಾಸರಹಳ್ಳಿ (ಭಾಗಶಃ), ಮಹಾಲಕ್ಷ್ಮಿ ಲೇಔಟ್, ರಾಜಾಜಿನಗರ, ಗೋವಿಂದರಾಜನಗರ, ಮಲ್ಲೇಶ್ವರಂ, ವಿಜಯನಗರ, ಬಸವನಗುಡಿ ಹಾಗೂ ಪದ್ಮನಾಭನಗರ (ಭಾಗಶಃ) ವಿಧಾನಸಭಾ ಕ್ಷೇತ್ರಗಳಲ್ಲಿ ಅರಣ್ಯ ವಿಭಾಗದ ವಿಶೇಷ ತಂಡಗಳನ್ನು ನಿಯೋಜಿಸಿ ಕಾರ್ಯಾಚರಣೆ ನಡೆಯುತ್ತಿದೆ.
⚠️ ಸಾರ್ವಜನಿಕರ ಸುರಕ್ಷತೆ ಹಾಗೂ ಸಂಭವನೀಯ ಅಪಘಾತಗಳನ್ನು ತಡೆಗಟ್ಟುವ ಉದ್ದೇಶದಿಂದ ಈ ಕಾರ್ಯಾಚರಣೆಗಳಿಗೆ ಆದ್ಯತೆ ನೀಡಲಾಗಿದೆ. ಮುಂದಿನ ದಿನಗಳಲ್ಲಿಯೂ ಮರಗಳ ಸ್ಥಿತಿಯನ್ನು ನಿಯಮಿತವಾಗಿ ಪರಿಶೀಲಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು.
📞 ಹೆಚ್ಚಿನ ಮಾಹಿತಿಗಾಗಿ:
ಸುದರ್ಶನ್
ಉಪ ವಲಯ ಅರಣ್ಯಾಧಿಕಾರಿ, ಪಶ್ಚಿಮ ನಗರ ಪಾಲಿಕೆ
ಮೊ.ಸಂ: 9480683341
#GreaterBengaluruAuthority
#BengaluruWestCityCorporation #PublicSafety #TreeMaintenance #UrbanSafety #CivicAction